ಚಿಕ್ಕಮಗಳೂರು: ಭೂ ಸುಧಾರಣ ಕಾಯ್ದೆ ತಿದ್ದುಪಡಿಯನ್ನು ರದ್ದುಪಡಿಸಬೇಕು. ನಮೂನೆ 53,57, 94 ಸಿ ಅಡಿಯಲ್ಲಿ ಅರ್ಜಿಸಲ್ಲಿಸಿದವರಿಗೆ ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಸಾಗರಬಣ) ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಬೇಡಿಕೆ ಈಡೇರಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು. ಕರ್ನಾಟಕದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ್ ಅರಸರು ದಲಿತ, ಬಡವರ ಹಿತದೃಷ್ಟಿಯಿಂದ ಉಳುವವನೆ ಭೂಮಿಯ ಒಡೆಯ ಮತ್ತು ಭೂಮಿತಿ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಈ ಕಾಯ್ದೆಯನ್ನು ಈಗ ರದ್ದುಗೊಳಿಸಿ, ಹೊಸ ಭೂ ಸುಧಾರಣೆ ಕಾಯ್ದೆಯನ್ನು ಜಾರಿಗೆ ತಂದಿರುವುದನ್ನು ಪುನರ್ ಪರಿಶೀಲಿಸಬೇಕು. ಈ ಹಿಂದಿನ ಕಾಯ್ದೆಯನ್ನೆ ಜಾರಿಗೆ ತರಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಮೂನೆ 53 ಹಾಗೂ 57 ಮತ್ತು 94 ಸಿ ಅಡಿಯಲ್ಲಿ ಲಕ್ಷಾಂತರ ಬಡಕುಟುಂಬಗಳು ಅರ್ಜಿ ಸಲ್ಲಿಸಿದ್ದು, ಸರ್ಕಾರ ನೇಮಿಸಿರುವ ಒತ್ತುವರಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಹಿತೈಷಿಗಳು ಮತ್ತು ಭೂ ಮಾಲೀಕರಿಗೆ ಅನುಕೂಲಮಾಡಿದೆ. ದಲಿತ ಕುಟುಂಬಗಳಿಗೆ ಹಕ್ಕುಪತ್ರ ನೀಡಿಲ್ಲ, ಅರ್ಜಿಸ ಲ್ಲಿಸಿದ ಎಲ್ಲಾ ಫಲಾನುಭವಿಗಳಿಗೆ ಹಕ್ಕುಪತ್ರನೀಡಬೇಕೆಂದು ಒತ್ತಾಯಿಸಿದರು.
ಜಾಹೀರಾತು/Advertisment
![]() |
---|
0 Comments