ಕೊಪ್ಪ: ಕರೊನಾ ಸೋಂಕಿಗೆ ತುತ್ತಾಗಿ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಪಟ್ಟಣದ ಸರ್ಕಾರಿ ಆಸ್ವತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಶೃಂಗೇರಿ ತಾಲೂಕಿನ ಬೇಗಾರು ಸಮೀಪದ ನಾಲ್ಕು ತಿಂಗಳ ಹೆಣ್ಣು ಮಗುವಿಗೆ ಅನಾರೋಗ್ಯವಿದ್ದ ಕಾರಣ ಶೃಂಗೇರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಿ ನಂತರ ಕೊಪ್ಪದ ಮಕ್ಕಳ ಖಾಸಗಿ ಆಸ್ವತ್ರೆ ಚಿಕಿತ್ಸೆ ನೀಡಲಾಗಿತ್ತು.
ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಪಟ್ಟಣದ ಸರ್ಕಾರಿ ಆಸ್ವತ್ರೆಗೆ ಚಿಕಿತ್ಸೆಗೆ ಕರೆದುಕೊಂಡ ಬಂದ ಕೆಲ ಹೊತ್ತಿನಲ್ಲಿ ಮಗು ಸಾವನ್ನಪ್ಪಿದೆ. ಮಗುವಿಗೆ ರ್ಯಾಪಿಡ್ ಟೆಸ್ಟ್ ಮಾಡಲಾಗಿದ್ದು. ಈ ವೇಳೆ ಕರೊನಾ ಪಾಸಿಟಿವ್ ವರದಿ ಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
1 Comments
M
ReplyDelete