ಚಿಕ್ಕಮಗಳೂರು: ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಪಟ್ಟಣ ಪಂಚಾಯತಿ ಸದಸ್ಯ ಆತ್ಮಹತ್ಯೆ ಯತ್ನಿಸಿರುವ ಘಟನೆ ಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆ.
ಅಧ್ಯಕ್ಷೆ ಸ್ಥಾನ ಬಿಟ್ಟು ಕೊಡದಿದ್ದಕ್ಕೆ ಮನನೊಂದು ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. 5-6 ಬಗೆಯ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಿಸಿದ ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದಾ, ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಜುಬೇದಾ ಅವರನ್ನು ಎನ್.ಆರ್.ಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗೆ ರವಾನೆ ಮಾಡಲಾಗಿದೆ.
ಮಾತುಕತೆಯಂತೆ ಪ್ರಸ್ತುತ ಅಧ್ಯಕ್ಷೆ ಸುರಯ್ಯಾ ಭಾನು ಅಧ್ಯಕ್ಷೆ ಅವಧಿ ಮುಗಿದಿದೆ. ಅವರು ಅಧ್ಯಕ್ಷೆ ಸ್ಥಾನಕ್ಕೆ ರಾಜಿನಾಮೆ ನೀಡಿ ಜುಬೇದ ಅವರಿಗೆ ಅಧಿಕಾರ ಬಿಟ್ಟುಕೊಡಬೇಕಾಗಿತ್ತು. ಆದರೇ ಸುರಯ್ಯಾ ಬಾನು ಅವರು ಅಧ್ಯಕ್ಷೆ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕಿದ್ದಾರೆ.
ಸುರಯ್ಯಾ ಬಾನು ರಾಜೀನಾಮೆಗೆ ಕಾಂಗ್ರೆಸ್ ಪಕ್ಷದ ಮುಖಂಡರಲ್ಲೇ ಮುಸುಕಿನ ಗುದ್ದಾಟ ನಡೆದಿತ್ತು. ಇದರಿಂದ ಮನನೊಂದು ಜಿಬೇದಾ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
1 Comments
But every casino has a rule e-book find a way to|you presumably can} guidance of} so you realize 카지노사이트 what’s being dealt is the standard. Electronic table games, or ETGs, had been greeted with lackluster enthusiasm after they had been first introduced to Las Vegas gamblers in early 2000. Compared to unfastened slot machines, these alternatives had been frowned upon initially.
ReplyDelete