Facebook

header logo

ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜ್ ದಾಖಲೆಯ ಫಲಿತಾಂಶ : ಸತತ ಮೂರನೇ ಭಾರಿ ಶೇ.100 ರಷ್ಟು ಸಾಧನೆ


ಜಾಹೀರಾತು/Advertisment

ಜಾಹೀರಾತು/Advertisment
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ಪಡೆದುಕೊಂಡಿದೆ.

ಕಾಲೇಜಿನಿಂದ ಈ ಬಾರಿ 582 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು, ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಮಿಯಲ್ಲಿಯೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ. 

ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್‌. ಹೆಚ್ 592 ಅಂಕ ಪಡೆದುಕೊಂಡು ರಾಜ್ಯಕ್ಕೆ 7ನೇ ರ‍್ಯಾಂಕ್‌ , ಹಂಸಿನಿ ವಿ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಸುಜಿತ್‌ ಡಿ. ಕೆ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಸಮೀಕ್ಷಾ ಎಸ್‌ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಪ್ರೇಮ್‌ ಸಾಗರ್‌ ಪಟೀಲ್‌ 589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್‌, ವರ್ಷ ಹೆಚ್. ವಿ 589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್‌ ಗಳಿಸಿದ್ದಾರೆ. 

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಾನ್ವಿ ರಾವ್‌ 595 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಸ್ಥಾನ, ಭಕ್ತಿ ಕಾಮತ್‌ 592 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಎ.‌ ಎಸ್. ಚಿನ್ಮಯ 592 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ಎ ಅನನ್ಯಾ ಜೈನ್‌ 589 ಅಂಕಗಳೊಂದಿಗೆ ರಾಜ್ಯಕ್ಕೆ 9 ನೇ ಸ್ಥಾನ ಗಳಿಸಿದ್ದಾರೆ. 

ಒಟ್ಟು ಪರೀಕ್ಷೆಗೆ ಹಾಜರಾದ 582 ವಿದ್ಯಾರ್ಥಿಗಳಲ್ಲಿ , 141 ವಿದ್ಯಾರ್ಥಿಗಳು 95 ಶೇಕಡಾ ಕ್ಕಿಂತ ಅಧಿಕ, 291 ವಿದ್ಯಾರ್ಥಿಗಳು 90 ಶೇಕಡಾ ಕ್ಕಿಂತ ಅಧಿಕ, 469 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

 ರಸಾಯನಶಾಸ್ತ್ರದಲ್ಲಿ 24, ಗಣಿತದಲ್ಲಿ 58, ಜೀವಶಾಸ್ತ್ರದಲ್ಲಿ 33, ಗಣಕ ವಿಜ್ಞಾನದಲ್ಲಿ 44, ಅರ್ಥಶಾಸ್ತ್ರದಲ್ಲಿ 03, ವ್ಯವಹಾರ ಅಧ್ಯಯನದಲ್ಲಿ 03, ಲೆಕ್ಕಶಾಸ್ತ್ರದಲ್ಲಿ   14,   ಕನ್ನಡದಲ್ಲಿ 10, ಸಂಸ್ಕೃತದಲ್ಲಿ 40 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕ ಗಳಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. 

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು  ಪ್ರಾರಂಭವಾದ ಮೊದಲ ವರ್ಷದಿಂದಲೂ ಶೇಕಡಾ 100 ಫಲಿತಾಂಶ ದಾಖಲಿಸುತ್ತಾ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಉಪನ್ಯಾಸಕೇತರ ವೃಂದದವರು ಸಂತಸ ವ್ಯಕ್ತಪಡಿಸಿ, ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಜಾಹೀರಾತು/Advertisment

Post a Comment

0 Comments