Facebook

header logo

ದೇವನಗೂಲ್: ಬಾಳೆ ಬೆಳೆ ಆನೆ ಪಾಲು| ಬೇಸತ್ತ ಗ್ರಾಮಸ್ಥರು


ಜಾಹೀರಾತು/Advertisment

ಜಾಹೀರಾತು/Advertisment
ಮೂಡಿಗೆರೆ: ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದ ತೋಟಗಳಿಗೆ ಬುಧವಾರ ರಾತ್ರಿ ಕಾಡಾನೆಯೊಂದು ನುಗ್ಗಿ ದಾಳಿ ನೆಡೆಸಿ, ಬೆಳೆ ನಾಶಪಡಿಸಿದೆ.

ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ ಮತ್ತು ಎಂ.ವೀರಪ್ಪಗೌಡ ಎಂಬವರ ಮನೆಯ ಬಳಿ ಒಂಟಿ ಸಲಾಗ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಹೋಗಿದೆ. 

ಕಾಫಿ ತೋಟಗಳಲ್ಲಿ ಕಾಡಾನೆಗಳು ಸಂಚರಿಸುವಾಗ  ಕಾಫಿ ಗಿಡಗಳನ್ನು ಕೂಡ ತುಳಿದು ಬೆಳೆ ಹಾನಿ ಮಾಡುತ್ತಿರುವುದರಿಂದ ಗ್ರಾಮಸ್ಥರು ಕಾಡಾನೆ ಕಾಟದಿಂದ ಬೇಸತ್ತಿದ್ದಾರೆ. ಹೀಗೆ ಕಾಡಾನೆ ಕಾಟ ಮುಂದುವರೆದರೆ ಜನರ ಪ್ರಾಣಕ್ಕೂ ಕುತ್ತು ಬರಲಿದೆ ಎಂದು ಗ್ರಾಮಸ್ಥ ಎಂ.ವೀರಪ್ಪಗೌಡ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಆನೆ ಕಾರ್ಯಪಡೆಯ ಬಸವರಾಜ್ ಕಾಡಾನೆ ಯಾವ ಭಾಗದಿಂದ ಬಂದಿದೆ ಎಂದು ಹೆಜ್ಜೆ ಗುರುತು ಪತ್ತೆಯಾಗುತ್ತಿಲ್ಲ. ಕಾಡಾನೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಳೆ ಬೆಳೆ ಹಾನಿಯಾದವರು ಸೂಕ್ತ ದಾಖಲೆಯೊಂದಿಗೆ ಅರ್ಜಿ ನೀಡಿದರೆ ಪರಿಹಾರ ನೀಡಲು ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪರಿಹಾರಕ್ಕೆ ಆಗ್ರಹಿಸಲಾಗುವುದು. ಸದ್ಯಕ್ಕೆ ಗ್ರಾಮಸ್ಥರು ರಾತ್ರಿ ವೇಳೆ ಎಚ್ಚರಿಕೆಯಿಂದ ಇರಬೇಕು ಎಂದು ಗ್ರಾಮಸ್ಥರಿಗೆ  ತಿಳಿಸಿದ್ದಾರೆ.


ಸ್ಥಳಕ್ಕೆ  ಉಪ ವಲಯ ಅರಣ್ಯಾಧಿಕಾರಿ ಕಿರಣ್,ಗಸ್ತು ಅರಣ್ಯ ಪಾಲಕ ಉಮೇಶ್,ಕಾರ್ಯಪಡೆ ಸಿಬ್ಬಂದಿ ಹೇಮಂತ್, ಮುರಳಿ,ಶಿವಕುಮಾರ್,ಸುರೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು/Advertisment

Post a Comment

0 Comments