Facebook

header logo

ಲೋಕಸಭಾ ಚುನಾವಣೆ: ಬೀಳುವುದೇ ನಕ್ಸಲ್ ಕರಿನೆರಳು.?


ಜಾಹೀರಾತು/Advertisment

ಜಾಹೀರಾತು/Advertisment
ಚಿಕ್ಕಮಗಳೂರು: ಚುನಾವಣಾ ಬಿಸಿ ದಿನೇ ದಿನೇ ಹೆಚ್ಚಾಗುತ್ತಿದೆ. ಇದರ ನಡುವೆಯೇ ರಾಜ್ಯದ ನಕ್ಸಲ್ ಪೀಡಿತ ಜಿಲ್ಲೆಗಳ ಚುನಾವಣೆಯ ಮೇಲೆ ಪರಿಣಾಮ ಬೀರಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲರ ಓಡಾಟ ಪತ್ತೆಯಾದ ಹಿನ್ನೆಲೆಯಲ್ಲಿ ಹೊಸ ಆತಂಕವೊಂದು ಮನೆ ಮಾಡಿದೆ.

ಒಂದು ಕಾಲದಲ್ಲಿ ನಕ್ಸಲ್ ಚಟುವಟಿಕೆಯ ತಾಣವಾಗಿದ್ದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾಗದಲ್ಲಿ ಹೆಚ್ಚು ಆತಂಕ ಮನೆ ಮಾಡಿದೆ. ಬಳಿಕ ಈ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ದೂರವಾಗಿದ್ದರೂ ಆಂತಕ ಹಾಗೆ ಇತ್ತು.

ಈಗ ಮತ್ತೆ  ಮಂಗಳೂರು ಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಮತ್ತೊಮ್ಮೆ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಇವೆ. ಇದರಲ್ಲಿ ಪೈಕಿ ನಾಲ್ಕು ನಕ್ಸಲ್‌ ಪೀಡಿತ ಕ್ಷೇತ್ರಗಳಾಗಿವೆ. ಆದ್ದರಿಂದ ಎಂದಿನಂತೆ ಈ  ಬಾರಿಯೂ ಪೊಲೀಸರ ಬಿಗಿ ಭದ್ರತೆಯಲ್ಲಿ ಚುನಾವಣೆ ನಡೆಯಲಿದೆ.  ಕುಂದಾಪುರ, ಕಾರ್ಕಳ, ಶೃಂಗೇರಿ, ಮೂಡಿಗೆರೆ ಕ್ಷೇತ್ರಗಳ ಹತ್ತಾರು ಹಳ್ಳಿಗಳು ನಕ್ಸಲ್‌ ಪೀಡಿತ ಪ್ರದೇಶಗಳಾಗಿದ್ದು,  ಇಲ್ಲಿ ಎಎನ್‌ಎಫ್ ಕೂಂಬಿಂಗ್ ನಡೆಸಿದಾಗ ಯಾವುದೇ ನಕ್ಸಲ್ ಚಟುವಟಿಕೆ ಕಂಡುಬಂದಿಲ್ಲ. ಆದರೆ ಚುನಾವಣಾ ಸಮಯದಲ್ಲಿ ನಕ್ಸಲರು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಭದ್ರತೆ ಹೆಚ್ಚಿಸಲಾಗಿದೆ.

ಸಾಮಾನ್ಯವಾಗಿ ಮಲೆನಾಡು ಭಾಗದಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತದೆ. ಅದರಲ್ಲೂ ನಕ್ಸಲ್ ಆತಂಕ ಇರುವುದರಿಂದ ಮತದಾನದ ಪ್ರಮಾಣದ ಮೇಲೆ ಪರಿಣಾಮ  ಬೀರಲಿದೆ ಎಂದು ಅಂದಾಜಿಸಲಾಗಿದೆ.  ಹೀಗಾಗಿ ಉಡುಪಿ, ಚಿಕ್ಕಮಗಳೂರು ಜಿಲ್ಲಾಡಳಿತಗಳು ಮತದಾನದ ಬಗ್ಗೆ ಅರಿವು  ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿವೆ. 

ಇಲ್ಲಿಯವರೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ  ಯಾವುದೇ ನಕ್ಸಲ್ ಓಡಾಟದ ಬಗ್ಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಮತದಾರರು ಯಾವುದೇ ಭಯ, ಆತಂಕಪಡದೇ ಮತದಾನ ಮಾಡಬೇಕು ಎಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ವಿದ್ಯಾಕುಮಾರಿ ಹೇಳಿದ್ದಾರೆ.

ಜಾಹೀರಾತು/Advertisment

Post a Comment

0 Comments