ಚಿಕ್ಕಮಗಳೂರು: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಎಂ.ಎಲ್.ಸಿ ಸಿ.ಟಿ ರವಿ ಆಶ್ಲೀಲ ಪದ ಪ್ರಯೋಗ ಸಂಬಂಧ ಪೊಲೀಸರು ಸಿ.ಟಿ ರವಿ ರವರನ್ನು ಬಂಧಿಸಿದ್ದಾರೆ. ಇತ್ತ ಬಂಧನ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾದ್ಯಂತ ಬಿಜೆಪ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಹನುಮಂತಪ್ಪ ವೃತ್ತದಲ್ಲಿ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಂದ ಸಿ.ಟಿ ರವಿ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ಅಂಬೇಡ್ಕರ್ ಮತ್ತು ಸಿ.ಟಿ ರವಿ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತರು ಹೆಬ್ಬಾಳ್ಕರ್, ಡಿ.ಕೆ.ಶಿ ಮತ್ತು ಸಿದ್ದು ವಿರುದ್ದ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರುತ್ತಿದ್ದಾರೆ. ಬಿಜೆಪಿ ವತಿಯಿಂದ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
0 Comments