ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ವ್ಯಾಪ್ತಿಯ ಬಾಳೂರು ಮೀಸಲು ಅರಣ್ಯದಲ್ಲಿ ಸೋಮವಾರ ರಾತ್ರಿ ಕಾಡಗಿಚ್ಚು ಉಂಟಾಗಿದ್ದು ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.
ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಬಿದಿರುತಳ ಗ್ರಾಮದ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ನೂರಾರು ಎಕರೆ ಅರಣ್ಯ ನಾಶವಾಗಿರುವ ಬಗ್ಗೆ ಮಾಹಿತಿ ಲಭಿಸಿದೆ.
ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಾಕಿದ್ದಾರೆ ಎಂಬ ಅನುಮಾನ ಮೂಡಿದೆ. ಕಾಡು ಪ್ರಾಣಿಗಳು ಹಾಗೂ ಸೂಕ್ಷ್ಮ ಪ್ರಭೇದದ ನೂರಾರು ಜಾತಿಯ ಪ್ರಾಣಿ ಪಕ್ಷಿಗಳ ಜೀವಕ್ಕೆ ಸಂಚಕರವಾಗಿದೆ. ಬಿದಿರುತಳ ಗ್ರಾಮಕ್ಕೆ ರಸ್ತೆ ವ್ಯವಸ್ಥೆ ಇಲ್ಲದೆ ಕಾಡ್ಗಿಚ್ಚು ನಂದಿಸುವುದು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಸವಾಲಿನ ಪ್ರಶ್ನೆಯಾಗಿದೆ.
ಜಾಹೀರಾತು/Advertisment
![]() |
---|
0 Comments