ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರೆದ ಗಾಳಿ-ಮಳೆ ಅಬ್ಬರ ಮುಂದುವರೆದಿದೆ. ಬೃಹತ್ ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್ ಆಗಿದೆ. ಕೈಮರ ಸಮೀಪ ಮರವೊಂದು ರಸ್ತೆಗೆ ಬಿದ್ದ ಕಾರಣ ಸಂಪರ್ಕ ಸ್ಥಗಿತಗೊಂಡಿದೆ.
ಮಳೆಯ ನಡುವೆ ಮರ ತೆರವುಗೊಳಿಸಲು ಪೊಲೀಸರು ಹಾಗೂ ಸ್ಥಳೀಯರ ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಜಾಹೀರಾತು/Advertisment
![]() |
---|
0 Comments