ಚಿಕ್ಕಮಗಳೂರು: ಜಿಲ್ಲಾದ್ಯಂತ ಮಳೆಯ ಅಬ್ಬರ ಕಳೆದ ಒಂದು ದಿನದಿಂದ ಹೆಚ್ಚಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಳೆಯ ಆರ್ಭಟಕ್ಕೆ ಗದ್ದೆ, ತೋಟಗಳಲ್ಲಿ ನೀರು ಆವರಿಸಿದೆ. ಮಳೆ ಜಾಸ್ತಿಯಾದ ಕಾರಣ ಶೀಥ ವಾತಾವರಣ ನಿರ್ಮಾಣವಾಗಿ ಅಡಿಕೆ ಬೆಳೆಗೆ ಕೊಳೆ ರೋಗದ ಭೀತಿ ರೈತರಲ್ಲಿ ಆವರಿಸಿದೆ.
ಶೃಂಗೇರಿ ತಾಲೂಕಿನಲ್ಲಿ ಭಾರೀ ಮಳೆಯ ಕಾರಣ ತುಂಗಾ ನದಿ ಮೈ ತುಂಬಿ ಹರಿಯುತ್ತಿದೆ. ಕೆರೆಕಟ್ಟೆ ಭಾಗದಲ್ಲಿ ಧಾರಾಕಾರ ಮಳೆಯ ಹಿನ್ನೆಲೆ ತುಂಗಾ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಆದ್ದರಿಂದ ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗಿದೆ.
ಮಳೆಯ ಕಾರಣ ರಸ್ತೆಗೂ ತುಂಗೆಯ ನೀರು ನುಗ್ಗಿದ್ದು ಸಂಚಾರಕ್ಕೆ ಕೊಂಚ ತೊಂದರೆಯಾಗಿದೆ. ಮಳೆ ಹೀಗೆ ಮುಂದುವರೆದರೆ ಗಾಂಧಿ ಮೈದಾನ, ಪ್ಯಾರಲಲ್ ರೋಡ್ ಜಲಾವೃತವಾಗುವ ಸಾದ್ಯತೆ ಹೆಚ್ಚಾಗಿದೆ.
ಮಳೆ ಹೆಚ್ಚಾಗಿರುವ ಹೊತ್ತಲ್ಲಿ ಜಿಲ್ಲೆಯ ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕು ಹಾಗೂ ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅ.17ರಂದು ಒಂದು ದಿನ ರಜೆಯನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಘೋಷಣೆ ಮಾಡಿದ್ದಾರೆ.
0 Comments